loading...
ಕರ್ನಾಟಕದ ಸಾಂಸ್ಕೃತಿಕ ಕ್ರೀಡೆಗಳಾದ ಕಂಬಳ ಹಾಗೂ ಎತ್ತಿನ ಗಾಡಿ ಓಟಕ್ಕೆ ಕರ್ನಾಟಕದ ಪ್ರಾಣಿ ಹಿಂಸೆ ನಿರ್ಬಂಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅನುಮತಿ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಂಬಳ ಹಾಗೂ ಎತ್ತಿನಗಾಡಿ ಓಟಕ್ಕೆ ಕಾಯ್ದೆಗೆ ತಿದ್ದುಪಡಿ ತಂದು ಅನುಮತಿ ನೀಡಲು ತೀರ್ಮಾನಿಸಲಾಗಿದೆ.
ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾದ ಜಲ್ಲಿಕಟ್ಟು ಪರ ಹೋರಾಟಕ್ಕೆ ಯಶಸ್ಸು ಸಿಕ್ಕ ಬೆನ್ನಲ್ಲೆ ಕರಾವಳಿ ಅಷ್ಟೇ ಅಲ್ಲದೆ ಕರ್ನಾಟಕದಾದ್ಯಂತ ಕಂಬಳ ಪರ ಹೋರಾಟ ಚುರುಕುಗೊಂಡಿತ್ತು. ಈಗ ರಾಜ್ಯ ಸರ್ಕಾರ ರಾಜ್ಯದ ಜನರ ಹೋರಾಟಕ್ಕೆ ಮನ್ನಣೆ ನೀಡಿ ಕಂಬಳ ಹಾಗೂ ಎತ್ತಿನಗಾಡಿ ಓಟಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
#IsupportKambala
loading...
Post a Comment