ವೈಕುಂಠ ಏಕಾದಶಿ ಪ್ರಯುಕ್ತ ಇಂದು ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬಂದಿದೆ. ತಿರುಪತಿ, ತಿರುಮಲ ಸೇರಿದಂತೆ ವೆಂಕಟೇಶ್ವರ ಸ್ವಾಮಿಯ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಲಾಗಿದ್ದು, ಭಕ್ತರು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ.
ವೈಕುಂಠನಾಥನ ದರ್ಶನಕ್ಕೆ ಕೆಲವೆಡೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ವೈಕುಂಠ ದ್ವಾರಗಳನ್ನು ನಿರ್ಮಿಸಿದ್ದು, ಇಲ್ಲಿಂದ ಪ್ರವೇಶ ಪಡೆದರೆ, ಒಳಿತಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಅನೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗಿದೆ. ಇದರೊಂದಿಗೆ ಭಕ್ತರಿಗೆ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ದೇವಾಲಯಗಳಲ್ಲಿ ದೇವರ ನಾಮ ಸ್ಮರಣೆ ನಡೆಯುತ್ತಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ವೈಕುಂಠನಾಥನ ದರ್ಶನ ಪಡೆದರೆ ಒಳ್ಳೆಯದಾಗುತ್ತದೆ ಎಂಬ ಭಾವನೆಯಿಂದ ರಾತ್ರಿಯಿಂದಲೇ ಭಕ್ತರು ದೇವಾಲಯಗಳಿಗೆ ಆಗಮಿಸುತ್ತಿದ್ದು, ವೆಂಕಟೇಶ್ವರ, ಶ್ರೀನಿವಾಸ ಮೊದಲಾದ ದೇವಾಲಯಗಳಲ್ಲಿ ಜನಜಾತ್ರೆಯೇ ನೆರೆದಿದೆ.
Kannada Dunia
Post a Comment