loading...
ಉಡುಪಿ : ಉಡುಪಿ ಕಾರ್ಕಳ ತಾಲೂಕಿನ ತೆಳ್ಳಾರು ಎಂಬಲ್ಲಿ ಅಕ್ರಮ ಕಸಾಯಿ ಖಾನೆ ಮೇಲೆ ಭಜರಂಗದಳ ಕಾರ್ಯಕರ್ತರು ಸ್ಥಳೀಯರ ಸಹಕಾರದಿಂದ ದಾಳಿ ನಡೆಸಿದ್ದಾರೆ.
ತೆಳ್ಳಾರುವಿನಲ್ಲಿ ಅಕ್ರಮ ಗೋಮಾಂಸ ಮಾರಾಟ ಹಾಗೂ ಗೋ ಸಾಕಾಣಿಕೆ ಅಡ್ಡೆ ಇರುವ ಬಗ್ಗೆ ಖಚಿತ ಮಾಹಿತಿಯನ್ನು ಆದರಿಸಿ ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳಿಯರು ದಾಳಿ ಮಾಡಿದ್ದಾರೆ. ಈ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೋಲೀಸರು ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂದಿಸಿದ್ದಾರೆ, ಇನ್ನಿಬ್ಬರು ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೋಲಿಸ್ ಬಂದೊಬಸ್ತ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
loading...
Post a Comment