Veerakesari 02:44
ರಾಯಚೂರಿನಲ್ಲಿ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸುಳ್ಳು ದಾಖಲೆಗಳನ್ನ ಸೃಷ್ಠಿಸಿ ಅಪ್ರಾಪ್ತ ಹಿಂದೂ ಹುಡುಗಿಯನ್ನ ಮುಸ್ಲಿಂ ಹುಡುಗ ಮದುವೆಯಾಗಲು ಮುಂದಾಗಿರುವುದು ಬಯಲಾಗಿದೆ. ಸಂಬಂಧವೇ ಇಲ್ಲದ ಗ್ರಾಮದ ಸುಳ್ಳು ದಾಖಲೆಗಳನ್ನ ಸೃಷ್ಠಿಸಿರುವ ಈ ದೊಡ್ಡ ಜಾಲದ ಬಗ್ಗೆ ಅನುಮಾನ ಮೂಡಿಸಿದೆ. ಸದ್ಯ ಹುಡುಗನ ವಿರುದ್ದ ಹುಡುಗಿ ಪೋಷಕರು ಬೀದರ್‍ನಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದಾರೆ.

 ಯುವತಿ ನಾಪತ್ತೆಯಾದ ದಿನವೇ ಸೃಷ್ಠಿಯಾದ ಈ ಸುಳ್ಳು ದಾಖಲೆಗಳಿಂದ ಯುವತಿಗೆ 19 ವರ್ಷಗಳಾಗಿವೆ ಅಂತ ಮದುವೆಗೆ ಅರ್ಜಿ ಸಲ್ಲಿಸಲಾಗಿದೆ. ಬೀದರ್‍ನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಶೇಖ್ ಜಮೀಲ್ ಅಪ್ರಾಪ್ತೆಯನ್ನ ಮದುವೆಯಾಗಲು ಮುಂದಾಗಿದ್ದಾನೆ. ಸುಳ್ಳು ದಾಖಲೆ ಸೃಷ್ಠಿಸಿ ಬಡ ಯುವತಿಯ ಮನ ಪರಿವರ್ತಿಸಿ ಲವ್ ಜಿಹಾದ್ ನಡೆದಿದೆ ಅಂತ ಗ್ರಾಮಸ್ಥರು, ಯುವತಿ ಪೋಷಕರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

ನಮಗೆ ಅರಿವಿಲ್ಲದೆ ಸುಳ್ಳು ದಾಖಲೆಯನ್ನ ಪಡೆದಿದ್ದಾರೆ ಅಂತ ಮೆದಕಿನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಬಿಲ್ ಕಲೆಕ್ಟರ್ ತಪ್ಪೊಪ್ಪಿಕೊಂಡಿದ್ದಾರೆ. ಮಾರ್ಚ್ 2 ರಂದು ನಕಲಿ ವಾಸಸ್ಥಳ ಪ್ರಮಾಣ ಪತ್ರ ಪಡೆದಿದ್ದು ಮೆದಕಿನಾಳ ಗ್ರಾ.ಪಂ.ನ ಸಿಸಿಟಿವಿ ಕ್ಯಾಮೆರಾದ ಅಂದಿನ ದೃಶ್ಯಾವಳಿಗಳನ್ನ ಅಳಿಸಿ ಹಾಕಲಾಗಿದೆ. ಇದೊಂದು ವ್ಯವಸ್ಥಿತ ಜಾಲದ ಕೆಲಸವೇನೋ ಅನ್ನೋ ಅನುಮಾನ ಮೂಡಿವೆ. ಬೀದರ್‍ನ ಮಹಿಳಾ ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತೆಯನ್ನ ಪೀಡಿಸುತ್ತಿದ್ದ ಶೇಖ್ ಜಮೀಲ್ ಮಾರ್ಚ್ 2 ರಂದು ಅವಳನ್ನ ಅಪಹರಿಸಿದ್ದಾನೆ ಅಂತ ಯುವತಿಯ ಪೋಷಕರು ಬೀದರ್‍ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಒಟ್ಟಿನಲ್ಲಿ, ಇಷ್ಟವಿಲ್ಲದಿದ್ದರೂ ಬಡ ಯುವತಿಯ ಮನವೊಲಿಸಿ ಅಥವಾ ಒತ್ತಾಯಪೂರ್ವಕವಾಗಿ ಶೇಖ್ ಜಮೀಲ್ ಲವ್ ಜಿಹಾದ್‍ಗೆ ಮುಂದಾಗಿದ್ದಾನೆ ಅಂತ ಆರೋಪ ಕೇಳಿಬಂದಿವೆ. ಸುಳ್ಳುದಾಖಲೆಗಳ ಸೃಷ್ಠಿ ಹಾಗೂ ಒಟ್ಟಾರೆ ಪ್ರಕರಣವನ್ನ ನೋಡಿದಾಗ ನಿಜಕ್ಕೂ ಲವ್ ಜಿಹಾದ್ ಜಾಲ ರಾಯಚೂರು ಹಾಗೂ ಬೀದರ್‍ನಲ್ಲಿ ಕೆಲಸ ಮಾಡುತ್ತಿದೆಯಾ ಅನ್ನೋ ಅನುಮಾನಗಳು ದಟ್ಟವಾಗಿ ಮೂಡಿವೆ.

ಕೃಪೆ :ಪಬ್ಲಿಕ್ ಟಿವಿ

Post a Comment

Powered by Blogger.