Veerakesari 17:44
ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮುಂದೆ ವಿಚಾರಣೆಗೆ ಹಾಜರಾಗಲು ವಿಫಲವಾದ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್  ನಾಯಕ್ ಪಾಸ್ ಪೋರ್ಟ್ ಅನ್ನು ಮಂಗಳವಾರ ರದ್ದುಗೊಳಿಸಲಾಗಿದೆ.
ವಿದೇಶಾಂಗ ಸಚಿವಾಲಯದ ಸೂಚನೆ ಹಿನ್ನೆಲೆಯಲ್ಲಿ ಮುಂಬೈನ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಇಂದು ಝಾಕಿರ್ ನಾಯಕ್ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಿದೆ.
ಝಾಕಿರ್ ನಾಯಕ್ ವಿರುದ್ಧದ ಭಯೋತ್ಪಾದನೆಗೆ ಹಣಕಾಸು ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಆರೋಪಿಯ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಕಳೆದ ವಾರ ಝಾಕಿರ್ ನಾಯಕ್ ಪಾಸ್ಟ್ ರದ್ದುಗೊಳಿಸುವಂತೆ ಮುಂಬೈ ಪ್ರಾದೇಶಿಕ ಕಚೇರಿಗೆ ಸೂಚಿಸಿತ್ತು. 
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣ ಹಾಗೂ ಹಣಕಾಸು ನೆರವು ನೀಡಿದ ಆರೋಪದ ಮೇಲೆ ನವೆಂಬರ್ 18, 2016ರಂದು ಝಾಕಿರ್ ನಾಯಕ್ ವಿರುದ್ಧ ಎನ್ ಐಎ ಕ್ರಿಮಿನಲ್ ಕೇಸ್ ದಾಖಲಿಸಿತ್ತು. 
ಇನ್ನು ನಾಯಕ್‌ ಒಡೆತನದ ಇಸ್ಲಾಮಿಕ್‌ ರಿಸರ್ಚ್‌ ಫೌಂಡೇಷನ್‌ (ಐಆರ್‌ಎಫ್‌) ಸಂಸ್ಥೆಯನ್ನು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಅಡಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
Source - Kannada Prabha
loading...

Post a Comment

Powered by Blogger.