Veerakesari 17:51
30 ದಿನದಿಂದ ಪ್ರತಿ 2 ಗಂಟೆಗೊಮ್ಮೆ ಯೋಧರ ಬದಲಾವಣೆ: ಮಾನವ ಸರಪಳಿ ಸ್ವರೂಪದಲ್ಲಿ ಕಾವಲು ಕಾಯುತ್ತಿರುವ ಸೇನೆ
ಕೋಲ್ಕತಾ: ಕಳೆದ 30 ದಿನಗಳಿಂದಲೂ ಸಿಕ್ಕಿಂ ಡೋಕ್ಲಾಮ್ ಗಡಿಯಲ್ಲಿ ಚೀನಾ ಸೇನೆಯ ಮೇಲೆ ಹದ್ದಿನ ಕಣ್ಣಿಟ್ಟಿರುವ ಭಾರತೀಯ ಸೇನೆಯ ಸುಮಾರು 350ಕ್ಕೂ ಹೆಚ್ಚು ಯೋಧರು ಮಾನವ ಸರಪಳಿ ಸ್ವರೂಪದಲ್ಲಿ ಕಾವಲು ಕಾಯುತ್ತಿದ್ದಾರೆಂದು ತಿಳಿದುಬಂದಿದೆ. 
ಕೆಲವೇ ಮೀಟರ್ ಗಳ ಅಂತರದಲ್ಲಿ 2 ಸಾಲುಗಳಲ್ಲಿ ನಿಂತಿರುವ ಭಾರತೀಯ ಯೋಧರು ಶಸ್ತ್ರಾಸ್ತ್ರ ಹೊಂದಿದ್ದಾರಾದರೂ, ಬಂದೂಕುಗಳನ್ನು ಕೆಳಮುಖವಾಗಿ ಹಿಡಿದಿದ್ದಾರೆಂದು ಹೇಳಲಾಗುತ್ತಿದೆ. 
ನಾಥು ಲಾ ಪಾಸ್ ನಿಂದ ಕೇವಲ 15 ಕಿ.ಮೀ ದೂರದಲ್ಲಿನ ಪ್ರದೇಶದಲ್ಲಿ ಸುಮಾರು 500 ಮೀಟರ್ ಉದ್ದಕ್ಕೆ ಇಂತಹ ಸಾಲು ನಿಲ್ಲಿಸಲಾಗಿದೆ. ಜೂ.6 ರಿಂದ ಯೋಧರ ಈ ಸಾಲು ಈ ರೀತಿ ನಿಲ್ಲಿಸಲಾಗಿದೆ. ಚೀನಾ ಸೇನೆಯೂ ಇದೇ ಮಾದರಿಯಲ್ಲಿ ಯೋಧರ ಮಾನವ ಸರಪಳಿ ರೂಪಿಸಿದೆ. ಡ್ರೋನ್ ಪರಿಶೀಲನೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ ಎಂದು ವರದಿಗಳಿ ತಿಳಿಸಿವೆ. 
ಉಭಯ ರಾಷ್ಟ್ರಗಳ ನಡುವೆ ಸೃಷ್ಟಿಯಾಗಿರುವ ಬಿಕ್ಕಟ್ಟು ಸುಧಾರಣೆಗೆ ರಾಜತಾಂತ್ರಿಕ ಸಂಪರ್ಕ ಸೇರಿದಂತೆ ಭಾರತ ವಿವಿಧ ಪ್ರಯತ್ನಗಳನ್ನು ನಡೆಸುತ್ತಿದೆಯಾದರೂ, ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ ಎಂಬ ಮಾತುಗಳು ಕೇಳಿಬರತೊಡಗಿವೆ. 
ಈ ಗಡಿ ಪ್ರದೇಶ ಸಮುದ್ರ ಮಟ್ಟದಿಂದ 4,500 ಮೀಟರ್ ಎತ್ತರದಲ್ಲಿದ್ದು, ಇಲ್ಲಿ ಗಾಳಿ ವಿರಳವಾಗಿದೆ. ಪ್ರತಿ ಎರಡು ಗಂಟೆಗೊಮ್ಮೆ ಭಾರತೀಯ ಸೇನಾ ಸಿಬ್ಬಂದಿಗಳು ತಮ್ಮ ಪಾಳಿ ಬದಲಾಯಿಸಿಕೊಳ್ಳುತ್ತಾರೆ. ಈ ರೀತಿ ಮುಖಾಮುಖಿ ದಿನದುದ್ದಕ್ಕೂ ಮುಂದುವರಿಯುತ್ತದೆ. ಚೀನಾದ ಗುರಿ ಡೋಕ್ಲಾಂ ಜಾಂಫರಿ ರಿಡ್ಜ್ ಆಗಿದ್ದು, ಇಲ್ಲಿ ಹಿಡಿತ ಸಾಧಿಸಿದರೆ ಚೀನಾಕ್ಕೆ ಭಾರತದ ಈಶಾನ್ಯ ರಾಜ್ಯಗಳ ನಡುವೆ ಸಂಪರ್ಕ ಸಾಧಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ವರದಿಗಳು ತಿಳಿಸಿವೆ. ಡೋಕ್ಲಾಮ್ ನಲ್ಲಿ ಚೀನಾ ರಸ್ತೆ ನಿರ್ಮಾಣಕ್ಕೆ ಯತ್ನಿಸಿರುವುದು ಉಭಯ ರಾಷ್ಟ್ರಗಳ ಯೋಧರ ನಡುವೆ ಘರ್ಷಣೆಗೆ ಕಾರಣವಾಗಿದೆ. 
Source - Kannada Prabha
loading...

Veerakesari 17:48
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಕಟ್ಟದೊಳಗೆ ಸಿಲುಕಿ ಹಾಕಿಕೊಂಡಿದ್ದ 200 ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಭಾರತೀಯ ಸೇನೆ ರಕ್ಷಣೆ ಮಾಡಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಮಂಗಳವಾರ ನಡೆದಿದೆ. 
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳ ದಾಳಿ ನಡೆಸುತ್ತಿತ್ತು. ಇದರ್ದೆ. ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. 
ಗಡಿಯಲ್ಲಿರುವ ಕಟ್ಟಡವೊಂದರಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿದ್ದರು. ಪಾಕಿಸ್ತಾನ ಸೇನೆ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಕಟ್ಟಡದಿಂದ ಹೊರ ಬರಲಾರದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾಣಾಪಾಯದಲ್ಲಿ ಸಿಲುಕಿಕೊಂಡಿದ್ದರು. ಈ ವೇಳೆ ಅಪ್ರಚೋದಿತ ಗುಂಡಿನ ದಾಳಿಗೆ ದಿಟ್ಟ ಉತ್ತರ ನೀಡಿದ ಭಾರತೀಯ ಸೇನೆ 200 ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ರಕ್ಷಣೆ ಮಾಡಿದೆ. ಅಲ್ಲದೆ, ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಸದೆಬಡಿದಿದೆ. ಗುಂಡಿನ ಚಕಮಕಿ ವೇಳೆ ಇಬ್ಬರು ಭಾರತೀಯ ಯೋಧರೂ ಕೂಡ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 
ಈ ಕುರಿತಂತೆ ಮಾಹಿತಿ ನೀಡಿರುವ ಶ್ರೀನಗರ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು, ಕುಪ್ವಾರ ಜಿಲ್ಲೆಯ ನೌಗಾಂ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರ ರೇಖೆ ಬಳಿ ಭಾರತೀಯ ಸೇನೆಯನ್ನು ಗುರುಯಾಗಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿತ್ತು. ಈ ವೇಳೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ. ಗುಂಡಿನ ಚಕಮಕಿ ವೇಳೆ 2 ಯೋಧರು ಹುತಾತ್ಮರಾಗಿದ್ದಾರೆಂದು ತಿಳಿಸಿದ್ದಾರೆ. 
ಗಡಿಯಲ್ಲಿ ಪಾಕಿಸ್ತಾನ ಸೇನೆ ನಡೆಸುತ್ತಿದ್ದ ಗುಂಡಿನ ದಾಳಿಗೆ ವಿಮಲ್ ಸಿಂಜಾಲಿ ಎಂಬ ಯೋಧ ಹುತಾತ್ಮರಾಗಿದ್ದಾರೆ. ಮತ್ತೊಬ್ಬ ಯೋಧನಿಗೆ ಗಂಭೀರವಾಗಿ ಗಾಯಗಳಾಗಿತ್ತು. ಗಾಯಗೊಂಡ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹುತಾತ್ಮರಾದರು ಎಂದು ತಿಳಿಸಿದ್ದಾರೆ. 
ಗಡಿಯಲ್ಲಿ ಪಾಕಿಸ್ತಾನ ಸೇನೆ ನಡೆಸುತ್ತಿದ್ದ ನಿರಂತರ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ನೌಶೆರಾ ಹಾಗೂ ರಜೌರಿ ಜಿಲ್ಲೆಗಳ ಕಡಾಲಿ, ಸೆಹಾರ್ ಮತ್ತು ಭವಾನಿ ಪ್ರದೇಶದಲ್ಲಿದ್ದ ಮೂರು ಶಾಲೆಗಳ ಕಟ್ಟಡಗಳಲ್ಲಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಿಲುಕಿಕೊಂಡಿದ್ದರು. 
ಕಡಾಲಿ ಪ್ರಾಥಮಿಕ ಶಾಲೆಯಲ್ಲಿ 12 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ನಂತರ ಶಾಲೆಯ ಆಡಳಿತ ಮಂಡಳಿಯ ಅಧಿಕಾರಿಗಳು ಗುಂಡಿನ ದಾಳಿಗಳ ನಡುವೆಯೂ ಸ್ಥಳೀಯರ ಸಹಾಯದೊಂದಿಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ಕಟ್ಟಡದೊಳಗೆ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳ ರಕ್ಷಣೆಗಾಗಿ ಸೇನೆ ಹಾಗೂ ಪೊಲೀಸರ 5 ಬುಲೆಟ್ ಫ್ರೂಫ್ ವಾಹನಗಳನ್ನು ಬಳಕೆ ಮಾಡಲಾಯಿತು. 
ಇದಾದ ಬಳಿಕ ಭವಾನಿ ಪ್ರದೇಶದಲ್ಲಿದ್ದ ಸರ್ಕಾರಿ ಶಾಲೆಯೊಂದರ ಕಟ್ಟದಲ್ಲಿ 150 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ನಂತರ ವಿದ್ಯಾರ್ಥಿಗಳನ್ನು ನೌಶೆರಾಗೆ ಸ್ಥಳಾಂತರ ಮಾಡಲಾಯಿತು. ಮತ್ತೊಂದು ಶಾಲೆಯಲ್ಲಿ 55 ವಿದ್ಯಾರ್ಥಿಗಳು ಸಿಲುಕಿಹಾಕಿಕೊಂಡಿದ್ದರು. ಗುಂಡಿನ ಚಕಮಕಿಗಳ ನಡುವೆಯೂ ಎಲ್ಲಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಯಿತು. ಪ್ರಸ್ತುತ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ಹಿನ್ನಲೆಯಲ್ಲಿ ನೌಶೆರಾ ಹಾಗೂ ಮಂಜಕೋಟೆ ಸೆಕ್ಟರ್ ಬಳಿಯಿರುವ ಶಾಲೆಗಳನ್ನು ಬಂದ್ ಮಾಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
Source : Kannada Prabha
loading...

Veerakesari 17:46
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಸಿಹಿ ಸುದ್ದಿ. ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ಶಬರಿಮಲೆಯಿಂದ 48 ಕಿ.ಮೀ.ದೂರದಲ್ಲಿ ವಿಮಾನ ನಿಲ್ದಾಣಕ್ಕೆ ನಿರ್ಮಾಣ ಪ್ರಸ್ತಾವಕ್ಕೆ ಕೇರಳ ಸಚಿವ ಸಂಪುಟ ಬುಧವಾರ ಅನುಮತಿ ನೀಡಿದೆ.
ಶಬರಿಮಲೆ ದೇವಸ್ಥಾನದಿಂದ 48 ಕಿ.ಮೀ. ದೂರದಲ್ಲಿರುವ ಎರುಮಲೆಯ ಹರಿಸನ್ಸ್ ಪ್ಲಾಂಟೆಷನ್ಸ್ ನ ಚೆರುವ್ಯಾಲಿ ಎಸ್ಟೇಟ್ ನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಪ್ರಸ್ತೂತ ಯಾತ್ರಿಕರು ರಸ್ತೆ ಮಾರ್ಗವಾಗಿ ಮಾತ್ರವೇ ಶಬರಿಮಲೆಗೆ ಹೋಗಬಹುದಾಗಿದೆ. ಇತ್ತೀಚಿಗೆ ಶಬರಿಮಲೆಗೆ ಹೋಗುವ ಯಾತ್ರಿಕರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಯಾತ್ರಿಕರ ಅನುಕೂಲಕ್ಕಾಗಿ ಕೇರಳ ಸರ್ಕಾರ ಕೊಟ್ಟಾಯಂ ಜಿಲ್ಲೆಯ ಕಂಜಿರಪಾಳ್ಯ ತಾಲೂಕಿನಲ್ಲಿ ಸುಮಾರು 2,263 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ.
Source - Kannada Prabha
loading...

Veerakesari 17:44
ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮುಂದೆ ವಿಚಾರಣೆಗೆ ಹಾಜರಾಗಲು ವಿಫಲವಾದ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್  ನಾಯಕ್ ಪಾಸ್ ಪೋರ್ಟ್ ಅನ್ನು ಮಂಗಳವಾರ ರದ್ದುಗೊಳಿಸಲಾಗಿದೆ.
ವಿದೇಶಾಂಗ ಸಚಿವಾಲಯದ ಸೂಚನೆ ಹಿನ್ನೆಲೆಯಲ್ಲಿ ಮುಂಬೈನ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಇಂದು ಝಾಕಿರ್ ನಾಯಕ್ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಿದೆ.
ಝಾಕಿರ್ ನಾಯಕ್ ವಿರುದ್ಧದ ಭಯೋತ್ಪಾದನೆಗೆ ಹಣಕಾಸು ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಆರೋಪಿಯ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಕಳೆದ ವಾರ ಝಾಕಿರ್ ನಾಯಕ್ ಪಾಸ್ಟ್ ರದ್ದುಗೊಳಿಸುವಂತೆ ಮುಂಬೈ ಪ್ರಾದೇಶಿಕ ಕಚೇರಿಗೆ ಸೂಚಿಸಿತ್ತು. 
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣ ಹಾಗೂ ಹಣಕಾಸು ನೆರವು ನೀಡಿದ ಆರೋಪದ ಮೇಲೆ ನವೆಂಬರ್ 18, 2016ರಂದು ಝಾಕಿರ್ ನಾಯಕ್ ವಿರುದ್ಧ ಎನ್ ಐಎ ಕ್ರಿಮಿನಲ್ ಕೇಸ್ ದಾಖಲಿಸಿತ್ತು. 
ಇನ್ನು ನಾಯಕ್‌ ಒಡೆತನದ ಇಸ್ಲಾಮಿಕ್‌ ರಿಸರ್ಚ್‌ ಫೌಂಡೇಷನ್‌ (ಐಆರ್‌ಎಫ್‌) ಸಂಸ್ಥೆಯನ್ನು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಅಡಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
Source - Kannada Prabha
loading...
Powered by Blogger.